ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಕಮಾಲ್, ಶಿರಾದಲ್ಲಿ ಇತಿಹಾಸ ಬರೆದ ಬಿಜೆಪಿ
(ಗಲ್ಪ್ ಕನ್ನಡಿಗ)ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಯಡಿಯೂರಪ್ಪ ಸರಕಾರದ ಕೈ ಬಲಪಡಿಸಿದ್ದಾರೆ.
(ಗಲ್ಪ್ ಕನ್ನಡಿಗ)ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾದ ಮುನಿರತ್ನ ಮೂರನೇ ಬಾರಿಗೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಘಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಆರಂಭದಿಂದಲೂ ಮುನಿರತ್ನ ಮುನ್ನಡೆಯನ್ನು ಸಾಧಿಸುತ್ತಾ ಬಂದು ಕೊನೆಯಲ್ಲಿ ವಿಜಯಿಯಾಗಿದ್ದಾರೆ.
(ಗಲ್ಪ್ ಕನ್ನಡಿಗ)ಇನ್ನೂ ಶಿರಾದಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಸೋಲನ್ನನುಭವಿಸಿದ್ದಾರೆ. ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ.
(ಗಲ್ಪ್ ಕನ್ನಡಿಗ)