
ಅನುಶ್ರೀ ವಿಚಾರಣೆ ನಡೆಸಿದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆ!
Tuesday, November 17, 2020
(ಗಲ್ಫ್ ಕನ್ನಡಿಗ)ಮಂಗಳೂರು; ಡ್ರಗ್ಸ್ ಪ್ರಕರಣ ಬೆಂಬತ್ತಿ ನಟಿ ಅನುಶ್ರೀ ಯನ್ನು ವಿಚಾರಣೆ ನಡೆಸಿದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
(ಗಲ್ಫ್ ಕನ್ನಡಿಗ)ಡ್ರಗ್ಸ್ ಪ್ರಕರಣ ವಿಚಾರಣೆ ಸಂದರ್ಭದಲ್ಲಿಯೆ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆಗ ಇವರ ವರ್ಗಾವಣೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತು. ಇದೀಗ ಮತ್ತೊಮ್ಮೆ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
(ಗಲ್ಫ್ ಕನ್ನಡಿಗ)ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಕಾಪು ಠಾಣೆಯ ಮಹೇಶ್ ಪ್ರಸಾದ್ ಅವರನ್ನು ನೇಮಿಸಲಾಗಿದೆ. ಮಂಗಳೂರು ಸಿಸಿಬಿ ಸಬ್ ಇನ್ಸ್ ಪೆಕ್ಟರ್ ಕಬ್ಬಾಳ್ ರಾಜ್ ಅವರನ್ನು ಚಿಕ್ಕಮಗಳೂರಿಗೆ ವರ್ಗಾಯಿಸಲಾಗಿದೆ.
(ಗಲ್ಫ್ ಕನ್ನಡಿಗ)