
ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಬಂದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಗೆ ಕೊನೆಗೂ ಸಿಕ್ಕಿತು ಸ್ಥಾನಮಾನ
ಉಡುಪಿ: ಬಿಜೆಪಿಯ ಸೈದ್ದಾಂತಿಕ ವಿರೋಧಿಯಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವ , ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಅವರಿಗೆ ಕೊನೆಗೂ ಬಿಜೆಪಿ ಸರಕಾರದಲ್ಲಿ ಸ್ಥಾನಮಾನ ಸಿಕ್ಕಿದೆ.
ಜನತಾದಳದಲ್ಲಿ ಸಚಿವರಾಗಿ ಅಲ್ಲಿಂದ ಕಾಂಗ್ರೆಸ್ ಗೆ ಪಕ್ಷಾಂತರವಾಗಿ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆ ಎರಡು ಮೂರು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದರು. ಬಿಜೆಪಿ ಗೆ ಹೋದರೂ ಅವರಿಗೆ ಸರಿಯಾದ ಸ್ಥಾನಮಾನ ಸಿಕ್ಕಿರಲಿಲ್ಲ. ಇದೀಗ ಬಿಜೆಪಿ ಸರಕಾರದಲ್ಲಿ ಅವರಿಗೆ ಹುದ್ದೆಯೊಂದು ಸಿಕ್ಕಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನು ಸರಕಾರ ನೇಮಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟನೆಯು ಹೊರಬಿದ್ದಿದೆ