
ಖ್ಯಾತ ಪತ್ರಕರ್ತ ರವಿ ಬೆಳೆಗೆರೆ ಹೃದಯಾಘಾತದಿಂದ ನಿಧನ
(ಗಲ್ಫ್ ಕನ್ನಡಿಗ)ಬೆಂಗಳೂರು; ಕನ್ನಡದ ಖ್ಯಾತ ಪತ್ರಕರ್ತ ರವಿ ಬೆಳೆಗೆರೆ(62) ರಾತ್ರಿ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ.
(ಗಲ್ಫ್ ಕನ್ನಡಿಗ)ರವಿ ಬೆಳೆಗೆರೆ ಅವರಿಗೆ ರಾತ್ರಿ 12 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
(ಗಲ್ಫ್ ಕನ್ನಡಿಗ)ರವಿ ಬೆಳಗೆರೆ ತಮ್ಮ ಪದ್ಮನಾಭ ನಗರದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತವಾಗಿದ್ದು ಕಚೇರಿ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.
(ಗಲ್ಫ್ ಕನ್ನಡಿಗ)