ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ (video)
Sunday, November 15, 2020
ಮಂಗಳೂರು: ದೀಪಾವಳಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ ಹಾಗೂ ಲಕ್ಷ್ಮಿ ಪೂಜೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಗೋಪೂಜೆಯಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್
ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಗೋ ರಕ್ಷಣೆ ಎಂದರೆ ದೇಶ, ಕುಟುಂಬ ಹಾಗೂ ಕೃಷಿ ರಕ್ಷಣೆ ಮಾಡಿದಂತೆ. ಗೋವು ವಿಶ್ವದ ತಾಯಿ ಎಂದು ಹೇಳಲಾಗುತ್ತದೆ. ಮನುಷ್ಯನ ಹುಟ್ಟಿನಿಂದ ಸಾವಿನ ವರೆಗೆ ಗೋ ಅವಿಭಾಜ್ಯ ಅಂಗ ಎಂದರು.
ಈ ಸಂದರ್ಭದಲ್ಲಿ ಮುಲ್ಕಿ ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು,ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ,ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಜಿ.ಪಂ.ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಕಸ್ತೂರಿ ಪಂಜ ಹಾಗೂ ಪಕ್ಷದ ಮುಖಂಡರು ,ಕಾರ್ಯಕರ್ತರು ಉಪಸ್ಥಿತರಿದ್ದರು.