
ಸಿ ಎಂ ಖುರ್ಚಿ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಯಡಿಯೂರಪ್ಪ ಅವರ ತಿರುಗೇಟು ( ವಿಡಿಯೋ ನೋಡಿ)
Wednesday, November 4, 2020
(ಗಲ್ಪ್ ಕನ್ನಡಿಗ)ಮಂಗಳೂರು; ಉಪಚುನಾವಣೆ ಬಳಿಕ ಸಿಎಂ ಸ್ಥಾನ ಬದಲಾವಣೆಯಾಗಲಿದೆ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
(ಗಲ್ಪ್ ಕನ್ನಡಿಗ)ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ನನಗೆ ದೆಹಲಿಯಿಂದ ಮಾಹಿತಿ ಬಂದಿದೆ. ಸಿಎಂ ಸ್ಥಾನ ಬದಲಾಗುತ್ತದೆ ಎಂದು ಹೇಳಿರುವುದು ಬೇಜವಾಬ್ದಾರಿಯುತ ಹೇಳಿಕೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆ ನೀಡುವುದನ್ನು ಅವರು ನಿಲ್ಲಿಸಬೇಕು ಎಂದರು.
(ಗಲ್ಪ್ ಕನ್ನಡಿಗ)ಉಪಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಅನುಭವಿಸಲಿದೆ ಎಂದು ಅವರು ಹೇಳಿದರು.
(ಗಲ್ಪ್ ಕನ್ನಡಿಗ)