-->
ಸುಳ್ಯದಲ್ಲಿ ಆರೋಪಿ ಪರಾರಿ: ಕೇರಳ ಪೊಲೀಸ್ ಮಹಾನಿರ್ದೇಶಕರಿಂದ 2 ಲಕ್ಷ ಬಹುಮಾನ ಘೋಷಣೆ

ಸುಳ್ಯದಲ್ಲಿ ಆರೋಪಿ ಪರಾರಿ: ಕೇರಳ ಪೊಲೀಸ್ ಮಹಾನಿರ್ದೇಶಕರಿಂದ 2 ಲಕ್ಷ ಬಹುಮಾನ ಘೋಷಣೆ

 



(
ಗಲ್ಪ್ ಕನ್ನಡಿಗ)ಮಂಗಳೂರು: ಸುಳ್ಯದಲ್ಲಿ ಪರಾರಿಯಾಗಿದ್ದ ಆರೋಪಿಯೋರ್ವನ ಬಗ್ಗೆ ಮಾಹಿತಿ ನೀಡುವವರಿಗೆ ಕೇರಳದ ಪೊಲೀಸ್ ಮಹಾನಿರ್ದೇಶಕರು ಎರಡು ಲಕ್ಷ ಬಹುಮಾನ ಘೋಷಿಸಿದ್ದಾರೆ.


 (ಗಲ್ಪ್ ಕನ್ನಡಿಗ)ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಬ್ದುಲ್ ಅಜೀಜ್ (33) ಎಂಬ ಕುಖ್ಯಾತ ಆರೋಪಿಯು ಸುಳ್ಯದಲ್ಲಿ ಪರಾರಿಯಾಗಿದ್ದ.

 

(ಗಲ್ಪ್ ಕನ್ನಡಿಗ)  ಸೆಪ್ಟೆಂಬರ್ 14ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿಈತ ಪೊಲೀಸರಿಂದ ತಪ್ಪಿಸಿಕೊಂಡಿದ್ದು, ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ   ರೂ.2ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಕೇರಳ ಪೊಲೀಸ್ ಮಹಾ ನಿರ್ದೇಶಕರು ಘೋಷಿಸಿದ್ದಾರೆ ಎಂಬುದಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಗಲ್ಪ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99