
6 ವಿದ್ಯಾರ್ಥಿನಿಯರ ಅತ್ಯಾಚಾರ ಮಾಡಿದ ಶಿಕ್ಷಕ: ಪಾಠ ಹೇಳಿಕೊಡುವ ನೆಪದಲ್ಲಿ ದುಷ್ಕೃತ್ಯ
(ಗಲ್ಪ್ ಕನ್ನಡಿಗ)ಹೈದರಾಬಾದ್: ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕನೊಬ್ಬ ಆರು ವಿದ್ಯಾರ್ಥಿನಿಯರನ್ನು ಅತ್ಯಾಚಾರ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.
(ಗಲ್ಪ್ ಕನ್ನಡಿಗ)ಕೊರೊನಾ ಕಾರಣ ಕೊಟ್ಟು ಇಲ್ಲಿನ 40 ವರ್ಷದ ಶಿಕ್ಷಕ ವಿದ್ಯಾರ್ಥಿನಿಯರನ್ನು ಒಬ್ಬೊಬ್ಬರನ್ನಾಗಿ ಕರೆಸಿಕೊಳ್ಳುತ್ತಿದ್ದ. ಹೀಗೆ ಒಂಟಿಯಾಗಿ ಬಂದ ವಿದ್ಯಾರ್ಥಿನಿಯರಿಗೆ ಈತ ತನ್ನ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ತೋರಿಸಿ ಅತ್ಯಾಚಾರವೆಸಗುತ್ತಿದ್ದ. ಅತ್ಯಾಚಾರವೆಸಗಿದ ಬಳಿಕ ಯಾರಿಗೂ ಹೇಳದಂತೆ ಬೆದರಿಸುತ್ತಿದ್ದ.
(ಗಲ್ಪ್ ಕನ್ನಡಿಗ)ಹೀಗೆ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯಕ್ಕೀಡಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿದ್ದು ವಿಚಾರರಿಸದಾಗ ಶಿಕ್ಷಕ ಅತ್ಯಾಚಾರವೆಸಗಿದ್ದನ್ನು ಬಾಯಿಬಿಟ್ಟಿದ್ದಾಳೆ.
(ಗಲ್ಪ್ ಕನ್ನಡಿಗ)ಶಿಕ್ಷಕನ ದುಷ್ಕೃತ್ಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯ ತಂದೆ ತಾಯಿ ಮತ್ತು ಗ್ರಾಮಸ್ಥರು ಶಿಕ್ಷಕನಿಗೆ ಥಳಿಸಿದ್ದಾರೆ. ಶಿಕ್ಷಕ ಏಳರಿಂದ ಹನ್ನೊಂದು ವರ್ಷ ವಯಸ್ಸಿನ ಆರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ತಿಳಿದುಬಂದಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
(ಗಲ್ಪ್ ಕನ್ನಡಿಗ)