ಬಂಟ್ವಾಳದಲ್ಲಿ ಜ.6 ರಂದು ಕಾಂಗ್ರೆಸ್ ಪಕ್ಷದ ಮೈಸೂರು ವಿಭಾಗೀಯ ಮಟ್ಟದ ಸಮಾವೇಶ; ರಮಾನಾಥ ರೈ (video)
Saturday, January 2, 2021
ಮಂಗಳೂರು; ಮೈಸೂರು ವಿಭಾಗ ಮಟ್ಟದ ಕಾಂಗ್ರೆಸ್ ಪಕ್ಷದ ಸಮಾವೇಶ ಬಂಟ್ವಾಳದಲ್ಲಿ ಜನವರಿ 6 ರಂದು ನಡೆಯಲಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ಕು ವಿಭಾಗೀಯ ಮಟ್ಟದಲ್ಲಿ ಮೊದಲ ಬಾರಿಗೆ ಮೈಸೂರು ವಿಭಾಗ ಮಟ್ಟದ ಪ್ರತಿನಿಧಿ ಸಮಾವೇಶ ಬಂಟ್ವಾಳದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಈಶ್ವರ ಖಂಡ್ರೆ ಸತೀಶ್ ಜಾರಕಿಹೊಳಿ ಮೊದಲಾದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮೈಸೂರು ವಿಭಾಗ ಮಟ್ಟದ ಪ್ರತಿನಿಧಿ ಸಮಾವೇಶದಲ್ಲಿ ಮೈಸೂರು ಚಾಮರಾಜನಗರ ಮಂಗಳೂರು ಉಡುಪಿ ಕೊಡಗು ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯ 677 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿರುವ ಸಮಾವೇಶ ಸಂಜೆ 7.30 ಕ್ಕೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು