ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯ ಸಮಸ್ಯೆ; ಆಸ್ಪತ್ರೆಗೆ ದಾಖಲು
Saturday, January 2, 2021
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ
ಇಂದು ಬೆಳಗ್ಗೆ ಹೃದಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಬಳಿಕ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಯಿತು. ಇಂದೇ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಈ ಘಟನೆ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿ ಅವರು ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Sad to hear that @SGanguly99 suffered a mild cardiac arrest and has been admitted to hospital.
— Mamata Banerjee (@MamataOfficial) January 2, 2021
Wishing him a speedy and full recovery. My thoughts and prayers are with him and his family!