ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ಬೆದರಿಕೆ: ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರೋಪ video
Saturday, January 2, 2021
ಮಂಗಳೂರು: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯು ಹಣ ಬಲ ತೋಳ್ಬಲ ಪ್ರದರ್ಶನ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆಪಾದಿಸಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕಿರುಕುಳ ತೊಂದರೆ ಕೊಡಲಾಗಿದೆ. ನಮ್ಮ ಅಭ್ಯರ್ಥಿಗಳನ್ನು ಬೆದರಿಸುವುದು, ಅಭ್ಯರ್ಥಿಗಳಿಗೆ ಆಮಿಷವೊಡ್ಡುವುದು ಮೊದಲಾದ ವಾಮಮಾರ್ಗ ಅನುಸರಿಸಿದ್ದಾರೆ. ಚುನಾವಣೆಯಲ್ಲಿ ಹಣ ಬಲ ತೋಳ್ಬಲ ಪ್ರದರ್ಶನ ಮಾಡಿದ್ದು ಇಂತಹ ಚುನಾವಣೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕಂಡಿಲ್ಲ ಎಂದು ಅವರು ಹೇಳಿದರು