ಮಂಗಳೂರು ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ಅಧಿಕಾರ ಸ್ವೀಕಾರ
Friday, January 1, 2021
mangalore police commissioner shashi kumar |
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ಆರೆ ತಿಂಗಳಲ್ಲಿ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ ನೇಮಕವಾಗಿದ್ದ ಶಶಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಮಂಗಳೂರು ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಿರ್ಗಮನ ಕಮೀಷನರ್ ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರೆ ಅಪರಾಧ ರಹಿತ ಸಮಾಜ ನಿರ್ಮಾಣವಾಗಲಿದೆ ಎಂದರು.