-->

ಅಮೇರಿಕಾದಲ್ಲಿ ಟ್ರಂಪ್ ಬೆಂಬಲಿಗರ ಹುಚ್ಚಾಟ- ಸಂಸತ್ ಕಟ್ಟಡಕ್ಕೆ ಬೆಂಕಿ

ಅಮೇರಿಕಾದಲ್ಲಿ ಟ್ರಂಪ್ ಬೆಂಬಲಿಗರ ಹುಚ್ಚಾಟ- ಸಂಸತ್ ಕಟ್ಟಡಕ್ಕೆ ಬೆಂಕಿ

ವಾಷಿಂಗ್ಟನ್;  ಅಮೇರಿಕಾದಲ್ಲಿ ಟ್ರಂಪ್ ಬೆಂಬಲಿಗರು ಹಿಂಸಾಚಾರದಲ್ಲಿ ತೊಡಗಿಕೊಂಡಿದ್ದು ಅಮೇರಿಕದ ಸಂಸತ್ ಭವನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರಚೋದನಕಾರಿ ಭಾಷಣ ಮಾಡಿದ ಬಳಿಕ ಭಾಷಣದಿಂದ ಪ್ರಭಾವಿತರಾದ ಟ್ರಂಪ್ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ.

ಅಮೇರಿಕಾದಲ್ಲಿ ನಡೆದ ಗಲಭೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕ್ಯಾಪಿಟಲ್ ಕಟ್ಟಡದಲ್ಲಿ ಗಲಭೆ ನಡೆಸಿದ ಟ್ರಂಪ್ ಬೆಂಬಲಿಗರ ಮೇಲೆ ಆಶ್ರುವಾಯು ಪ್ರಯೋಗಿಸಿದಾಗ ಟ್ರಂಪ್ ಬೆಂಬಲಿಗರು ಸಂಸತ್ ಭವನದ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ಹಲವರಿಗೆ ಗಾಯಗಳಾಗಿದೆ.ಘಟನೆ ಹಿನ್ನೆಲೆಯಲ್ಲಿ 52 ಮಂದಿಯನ್ನು ಬಂಧಿಸಲಾಗಿದೆ. ವಾಷಿಂಗ್ಟನ್ ನಲ್ಲಿ 15 ದಿನ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99