ಮಂಗಳೂರು:ಇವನೆಂಥ ಕಿರಾತಕ- 18ರ ಮೂಗಿಯನ್ನೂ ಬಿಡದ ಕಾಮುಕ!
Monday, February 1, 2021
ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ನುಗ್ಗಿದ ಕಾಮುಕನೋರ್ವ ಮೂಗಿ-ಕಿವುಡಿ ಯುವತಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿ ಕಂಬಿ ಎಣಿಸುವಂತೆ ಮಾಡಿದ್ದಾರೆ.
ಆರೋಪಿ ಯುವತಿ ಮನೆಯ ನೆರೆ ನಿವಾಸಿಯಾಗಿದ್ದು, ಯಾವಾಗಲೂ ಆಕೆ ತನ್ನ ತಾಯಿಯ ಟೈಲರ್ ಶಾಪ್ ನಲ್ಲಿ ಕೆಲಸ ಮಾಡುತ್ತಿರುವುದನ್ನು ನೋಡುತ್ತಿದ್ದ. ನಿನ್ನೆ ಬೆಳಗ್ಗೆ 11 ರ ಸುಮಾರಿಗೆ ಯುವತಿಯ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಏಕಾಏಕಿ ಮನೆಯೊಳಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಸಂದರ್ಭ ಯುವತಿಯ ಸಂಬಂಧಿಕರೋರ್ವರು ಮನೆಗೆ ಬಂದಿದ್ದು, ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಯುವತಿ ಕೂಗುತ್ತಿರುವುದನ್ನು ಗಮನಿಸಿದ ಅವರು ಈ ಬಗ್ಗೆ ವಿಚಾರಿಸಿದಾಗ ಪ್ರಕರಣ ಬಯಲಿಗೆ ಬಂದಿದೆ.
ಈ ಬಗ್ಗೆ ಯುವತಿ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.