ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಯುವತಿ ಸ್ನಾನ ಮಾಡುತ್ತಿದ್ದ ದೃಶ್ಯ ಮೊಬೈಲ್ ನಲ್ಲಿ ಸೆರೆ; ಆಸ್ಪತ್ರೆಯಲ್ಲಿ ಮದನಿನಗರ ಅಬ್ದುಲ್ ಮುನೀರನ ಅವಾಂತರ


ಮಂಗಳೂರು;ಆಸ್ಪತ್ರೆಯಲ್ಲಿ ಯುವತಿಯೊಬ್ಬಳು
ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದ  ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ವ್ಯಕ್ತಿ. ಈತ ಮೊಬೈಲ್ ನಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯ ಸೆರೆಹಿಡಿದದ್ದು ಬೆಳಕಿಗೆ ಬಂದ ಬಳಿಕ ನಾಪತ್ತೆಯಾಗಿದ್ದ.

ಘಟನೆ ಹಿನ್ನೆಲೆ;
ಅನಾರೋಗ್ಯ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರ ಜತೆಗಿದ್ದ ಯುವತಿ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆ ಹಿಡಿದಿದ್ದ. ಮೊಬೈಲ್ ನಲ್ಲಿ ಶೂಟ್ ಮಾಡುತ್ತಿರುವುದನ್ನು  ಗಮನಿಸಿದ ಮಹಿಳೆ ಕೂಡಲೇ ಹೊರ ಬಂದಾಗ, ಆರೋಪಿ ಮುನೀರ್ ಅಲ್ಲಿಂದ ಪರಾರಿಯಾಗಿದ್ದ.ಈ ಕುರಿತು ಮಹಿಳೆ ಜನವರಿ 20ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW