
ಸುರತ್ಕಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಬೆಂಗಳೂರಿನ ಯುವತಿಯ ರಕ್ಷಣೆ- ಇಬ್ಬರು ಅಂದರ್!
Monday, March 1, 2021
ಮಂಗಳೂರು; ಮಂಗಳೂರಿನ ಸುರತ್ಕಲ್ ನಲ್ಲಿ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಪೊಲೀಸರು ಬೆಂಗಳೂರಿನ ಯುವತಿಯನ್ನು ರಕ್ಷಿಸಿದ್ದಾರೆ.
ಈ ಯುವತಿಯನ್ನು ಇಟ್ಟುಕೊಂಡು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ತಾಲೂಕು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ BASF ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೇಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನ ರೂಮ್ ನಂ-205 ರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಇಲ್ಲಿಗೆ ದಾಳಿ ನಡೆಸಿದ ಪೊಲೀಸರು ಹಳೆಯಂಗಡಿಯ ಹರೀಶ್ (42) ಬಂಟ್ವಾಳ ತಾಲೂಕಿನ ದಡ್ಡಲ್ ಕಾಡ್ ನ ಲೋಕನಾಥ್ ಫೂಜಾರಿ @ ನವೀನ್ (42) ಎಂಬವರನ್ನು ಬಂಧಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.