104 ವರ್ಷ ವಯಸ್ಸಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇನ್ನಿಲ್ಲ
Wednesday, May 26, 2021
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. 104 ವರ್ಷದ ಎಚ್ ಎಸ್ ದೊರೆಸ್ವಾಮಿ ಅವರು ಇತ್ತೀಚೆಗಷ್ಟೆ ಕೊರೊನಾದಿಂದ ಗುಣಮುಖರಾಗಿದ್ದರು. ಅವರು ಕೊರೊನಾ ಸೋಂಕಿಗೊಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ದಿಂದ ಗುಣಮುಖರಾಗಿ ಮನೆಗೆ ಮರಳಿದ್ದ ಅವರಿಗೆ ನಿಶ್ಯಕ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಹೃದಾಯಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.