-->
ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯುಸಿ ಪರೀಕ್ಷೆ ರದ್ದು

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯುಸಿ ಪರೀಕ್ಷೆ ರದ್ದು


ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ  ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯ ಸರಕಾರ ಮುಂದೂಡಿದೆ.
 
 ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಈ ವಿಚಾರ ಪ್ರಕಟಿಸಿದ್ದು ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

  ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು . ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ಕಲಿಕೆಯನ್ನು ಎಂದಿನಂತೆ ಮುಂದುವರಿಸಬೇಕೆಂದು ಅವರು ತಿಳಿಸಿದ್ದಾರೆ. 

ಇನ್ನು ಪ್ರಥಮ ಪಿಯು ಪರೀಕ್ಷೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ . ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ ಗಳು ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಿದರು

Ads on article

Advertise in articles 1

advertising articles 2

Advertise under the article