
Breaking News ; ರಾಜ್ಯದಲ್ಲಿ ಜೂನ್ 7 ವರೆಗೆ ಲಾಕ್ ಡೌನ್ ವಿಸ್ತರಣೆ- ಮುಖ್ಯಮಂತ್ರಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ಡೌನ್ ನ್ನು ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಮುಖ್ಯಮಂತ್ರಿ ಬಿಎಸ್ವೈ ಮಹತ್ವದ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ದಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ಲಾಕ್ಡೌನ್ ವಿಸ್ತರಣೆಯಾಗಲಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಜಾರಿಗೊಂಡಿರುವ ಲಾಕ್ ಡೌನ್ ಮುಂದಿನ 14 ದಿನಗಳ ಕಾಲ ಮುಂದುವರೆಯಲಿದೆ.ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ಡೌನ್ ಮಾರ್ಗಸೂಚಿ ನಿಯಮ ಪಾಲನೆ ಕಡ್ಡಾಯವಾಗಿದ್ದು, ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ