ಮಂಗಳೂರಿನಲ್ಲಿ ಸರಳ ರೀತಿಯಲ್ಲಿ ಈದುಲ್ ಫಿತ್ರ್ ಆಚರಣೆ (video)
Thursday, May 13, 2021
ಮಂಗಳೂರು: ರಂಝಾನ್ ಉಪವಾಸ ವೃತಾಚರಣೆ ಕೊನೆಗೊಂಡ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಮ್ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಸರಳವಾಗಿ ಆಚರಿಸಿದರು.
ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲ್ಪಟ್ಟ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಕುಟುಂಬಿಕರ ಜೊತೆಗೂಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯವನ್ನ ವಿನಿಮಯ ಮಾಡಿಕೊಂಡರು.
ಲಾಕ್ ಡೌನ್ ನಿಂದಾಗಿ ಈದ್ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ತ್ವಾಕ ಅಹಮದ್ ಮುಸ್ಲಿಯಾರ್ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.