
ಬೆಂಗಳೂರು ಯುವತಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಮಹಜರು ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗಳಿಗೆ ಗುಂಡೇಟು
Friday, May 28, 2021
ಬೆಂಗಳೂರು: ಬೆಂಗಳೂರಿನಲ್ಲಿದ್ದ ಬಾಂಗ್ಲಾ ಮೂಲದ ಯುವತಿಗೆ ಆಕೆಯ ಸ್ನೇಹಿತರೇ ಲೈಂಗಿಕ ದೌರ್ಜನ್ಯ ಎಸಗಿ ಅದೆ ವಿಡಿಯೋ ವನ್ನು ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಗಳನ್ನು ಮಹಜರುಗೆ ಕೊಂಡೋದ ವೇಳೆ ಪರಾರಿಗೆ ಯತ್ನಿಸಿದ ವೇಳೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಪೊಲೀಸರು ಬೆಂಗಳೂರು ಯುವತಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿ ಇಂದು ಸ್ಥಳ ಮಹಜರಿಗೆ ಇಬ್ಬರನ್ನು ಕರೆದೊಯ್ಯುತ್ತಿದ್ದರು. ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೇ ಶರಣಾಗುವಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಅವರು ಕೇಳದ ಹಿನ್ನೆಲೆಯಲ್ಲಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ಬಂಧಿತರಾದ ಆರು ಆರೋಪಿಗಳಲ್ಲಿ ಬಾಂಗ್ಲಾ ಮೂಲದ ರಿದಯ್ ಬಾಬು ಹಾಗೂ ಸಾಗರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಿದಯ್ ಬಾಬು ಹಾಗೂ ಸಾಗರ್ ನನ್ನು ಬೆಳಗ್ಗೆ ಸ್ಥಳ ಮಹಜರಿಗೆಂದು ಚನ್ನಸಂದ್ರ ಕನಕನಗರದ ಬಳಿ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಪರಾರಿಯಾಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಆದರೆ ಆರೋಪಿಗಳು ಹಲ್ಲೆ ಮುಂದುವರಿಸಿದಾಗ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.