Instagram ನಲ್ಲಿ ಯುವತಿಯ ಹೆಸರಿನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ಅಶ್ಲೀಲ ಬರಹ; ಯುವಕ ಪರಾರಿ
Sunday, May 23, 2021
ವಿಜಯಪುರ: Instagram ನಲ್ಲಿ ಯುವತಿಯ ಹೆಸರಿನಲ್ಲಿ ನಕಲಿ ಖಾತೆ ರಚನೆ ಮಾಡಿ, ಅಶ್ಲೀಲ ಬರಹದೊಂದಿಗೆ ಫೋಟೋ ಅಪ್ಲೋಡ್ ಮಾಡಿದ್ದ ವ್ಯಕ್ತಿಯ ವಿರುದ್ಧ ವಿಜಯಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ ದ ಬಿ.ಸಾಲವಾಡಗಿ ಗ್ರಾಮದ ಸಿದ್ದನಗೌಡ ಪಾಟೀಲ ಎಂಬಾತ ಈ ಕೃತ್ಯವೆಸಗಿದ ಆರೋಪಿ. ಆರೋಪಿ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಎಸ್ಪಿ ಅನುಪಮ ಅಗರವಾಲ ತಿಳಿಸಿದ್ದಾರೆ.
ಆರೋಪಿ ಸಿದ್ದನಗೌಡ ಪಾಟೀಲ ಯುವತಿಯ ಹೆಸರಿನಲ್ಲಿ ನಕಲಿ Instagram ಖಾತೆ ಆರಂಭಿಸಿ, ಆ ಖಾತೆಯಲ್ಲಿ ಅಶ್ಲೀಲ ಬರಹ ಬರೆದು ಅಪ್ಲೋಡ್ ಮಾಡಿದ್ದಾನೆ. ಬಳಿಕ ಈತ ಖಾತೆಯನ್ನು ಸರಿಪಡಿಸಲು ಯತ್ನಿಸಿದ್ದಾನೆ.
ಆದರೆ ಮಾಹಿತಿ ತಿಳಿದ ಯುವತಿ, ತನ್ನ ಹಾಗೂ ತಮ್ಮ ಕುಟುಂಬದ ಮರ್ಯಾದೆ ಹಾಳು ಮಾಡಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ತಲೆ ಮರೆಸಿಕೊಂಡ ಆರೋಪಿಯ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.