-->

ದಲಿತ ಯುವಕನಿಗೆ ಮೂತ್ರ ಕುಡಿಸಿದ ಎಸ್ ಐ ಯ ಅಮಾನತು ಮಾಡಿದ ಪಶ್ಚಿಮ ವಲಯ ಐಜಿಪಿ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಎಸ್ ಐ ಯ ಅಮಾನತು ಮಾಡಿದ ಪಶ್ಚಿಮ ವಲಯ ಐಜಿಪಿ


ಮಂಗಳೂರು; ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡುವಿನಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಎಸ್ ಐ  ಯನ್ನು ಅಮಾನತು ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.

ಗೋಣಿಬೀಡು ಎಸ್ ಐ ಅರ್ಜುನ್ ಹೊರಕೇರಿ ಅವರು ದಲಿತ ಯುವಕನನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿ ಇನ್ನೋರ್ವ ಅಪರಾಧಿಯ ಮೂತ್ರ  ಕುಡಿಸಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪೊ ಯವರು ಎಸ್ ಐ ಅರ್ಜುನ್ ಹೊರಕೇರಿಯನ್ನು ಶಿಸ್ತು ಕ್ರಮ ಬಾಕಿಯಿರಿಸಿ ಸೇವೆಯಿಂದ ಅಮಾನತು ಮಾಡಿದ್ದಾರೆ . ಪ್ರಕರಣದ ತನಿಖೆಯನ್ನು ಸಿಐಡಿಗೆ  ಹಸ್ತಾಂತರಿಸಲಾಗಿದೆ. ಈ ಪ್ರಕರಣದ ಪ್ರಾಥಮಿಕ ವಿಚಾರಣಾ ವರದಿ ಸಲ್ಲಿಸುವಂತೆ ಪುತ್ತೂರು ಉಪವಿಭಾಗದ  ಪೊಲೀಸ್ ಉಪಾಧೀಕ್ಷಕರಿಗೆ ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99