Mangalore; ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪತ್ತೆ- ಈತ ಚಿನ್ನ ಬಚ್ಚಿಟ್ಟದ್ದು ಆ ಜಾಗದಲ್ಲಿ
Friday, May 28, 2021
ಮಂಗಳೂರು; ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ರೂ 13.2 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬ 27 ವರ್ಷದ ಯುವಕ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಈತ ಇಂದು ದುಬಾಯಿನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿದ್ದು ಈತನನ್ನು ತಪಾಸಣೆ ಮಾಡುವ ವೇಳೆ ಈತ ಗೋಲ್ಡ್ ಸ್ಮಗ್ಲಿಂಗ್ ಮಾಡುವುದನ್ನು ಪತ್ತೆ ಹಚ್ಚಲಾಗಿದೆ. ಈತ ಗುದದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಡಗಿಸಿಟ್ಟು ತಂದಿದ್ದ. ಈತನಿಂದ ರೂ 13.2 ಲಕ್ಷ ರೂ ಮೌಲ್ಯದ 262 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.