
Mangalore: ಡಿವೈಡರ್ ಹಾರಿ ಬಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಕಾರು: ತಾಯಿ ಮೃತ್ಯು, ಮಗಳು ಗಂಭೀರ
ಉಳ್ಳಾಲ: ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ತಾಯಿ ಮಗಳಿಗೆ ವಿರುದ್ಧ ದಿಕ್ಕಿನಿಂದ ಅಮಿತ ವೇಗದಲ್ಲಿ ಬಂದ ಕಾರು ಢಿಕ್ಕಿ ಹೊಡೆದು, ತಾಯಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ತೊಕ್ಕೋಟು ಫ್ಲೈ ಓವರ್‌ನಲ್ಲಿ ನಡೆದಿದೆ.
ಮೃತಪಟ್ಟ ವರನ್ನು ಕುಂಪಲದ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ ಎಂದು ಗುರುತಿಸಲಾಗಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ ಮಗಳು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಸಂತಿ ನಾಯರ್ ಆಸ್ಪತ್ರೆಯಲ್ಲಿದ್ದ ತಾಯಿಯನ್ನು ನೋಡಲು ಮಗಳು ಶ್ರೀಜಾ ಜೊತೆ ಸ್ಕೂಟರ್ ನಲ್ಲಿ ತೆರಳಿದ್ದರು. ಈ ಸಂದರ್ಭ ಫ್ಲೈ ಓವರ್ ನಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ವಸಂತಿ ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ್ದಾರೆ.
ಕಾರುಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.