ಶಾಲಾ ಮಕ್ಕಳಿಗೆ ಸಿಗಲಿದೆ ಉಚಿತ ಮೊಬೈಲ್: ಯಾರಿಗೆಲ್ಲಾ ಸಿಗಲಿದೆ ಗೊತ್ತಾ?
Monday, May 24, 2021
ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಆನ್‌ಲೈನ್ ಕ್ಲಾಸ್‌ಗಳಿಂದಾಗಿ ಬಡ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ಗಳನ್ನು ನೀಡಲಾಗುವುದು ಎಂದು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನ ಆನ್‌ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ಗಳ ಅಗತ್ಯವಿದ್ದು, ಹಳ್ಳಿಗಳಲ್ಲಿ ಅದೆಷ್ಟೋ ಬಡ ವಿದ್ಯಾರ್ಥಿಗಳಲ್ಲಿ ಮೊಬೈಲ್ ಗಳಿಲ್ಲ. ಈ ನಿಟ್ಟಿನಲ್ಲಿ ಅವರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಈಗಾಗಲೇ ಸರ್ವೆ ನಡೆಸಲಾಗಿದ್ದು, ಇದರ ಆಧಾರದಲ್ಲಿ ಮೊಬೈಲ್ ವಿತರಿಸಲಾಗುದು ಎಂದರು.
ಈ ನಿಟ್ಟಿನಲ್ಲಿ ಸ್ಮಾರ್ಟ್ ಫೋನ್ ಬ್ಯಾಂಕ್‌ಗಾಗಿ ವಿವಿಧ ಸಂಘ ಸಂಸ್ಥೆಗಳ ನೆರವು ಪಡೆಯಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.