ಎರಡು ಡೋಸ್ ಲಸಿಕೆ ತೆಗೆದುಕೊಂಡಿದೆ ಎಂದು ಮೈಮರೆಯಬೇಡಿ- ಮಂಗಳೂರಿನಲ್ಲಿ ಲಸಿಕೆ ತೆಗೊಂಡ್ರು ಬದುಕುಳಿಯಲಿಲ್ಲ ಪೊಲೀಸ್
Friday, May 14, 2021
ಮಂಗಳೂರು: ಕೊರೊನಾ ಲಸಿಕೆ ಎರಡು ಡೋಸ್ ತೆಗೆದುಕೊಂಡಿದ್ದ ಮಂಗಳೂರಿನ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರಿನ ರಿಸರ್ವ್ ಪೊಲೀಸ್ ಸಿಬ್ಬಂದಿಯಾಗಿದ್ದ ಶಿದ್ದಪ್ಪ ಶಿಂಗೆ ಮೃತಪಟ್ಟವರು. ಇವರು ಮಾಜಿ ಸೈನಿಕರಾಗಿದ್ದು ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಪೊಲೀಸ್ ಇಲಾಖೆ ಸೇರಿಕೊಂಡಿದ್ದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರು ಗ್ರಾಮದ ಇವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದ ಇವರು ಕೊರೊನಾ ಪಾಸಿಟಿವ್ ಬಂದ ಬಳಿಕ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹುಅಂಗಾಂಗ ವೈಫಲ್ಯದಿಂದ ಅವರು ಮೃತಪಟ್ಟಿದ್ದಾರೆ.
ಕೊರೊನಾ ಲಸಿಕೆ ತೆಗೆದುಕೊಂಡಿದೆ ಎಂದು ಮೈಮರೆಯಬೇಡಿ
ಕೊರೊನಾ ಲಸಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಯಾರೂ ಕೂಡ ಸರಕಾರದ ನಿಯಮಾವಳಿಗಳನ್ನು ನಿರ್ಲಕ್ಷ್ಯ ಮಾಡಬೇಡಿ. ಕೊರೊನಾ ಲಸಿಕೆ ತೆಗೆದುಕೊಂಡಿದ್ದರು ಸರಕಾರವು ನೀಡಿರುವ ಮಾರ್ಗದರ್ಶನಗಳನ್ನು ಪಾಲಿಸಿ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.