-->

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ; ಸಚಿವ ಸುರೇಶ್ ಕುಮಾರ್

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ; ಸಚಿವ ಸುರೇಶ್ ಕುಮಾರ್

ಬೆಂಗಳೂರು: 2020-21 ರ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ  ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದ್ದು ಕೊರೊನಾ ಎರಡನೇ‌ ಅಲೆ ಸಂಪೂರ್ಣ ತಹಬದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರ, ವಿವಿಧ ಶಾಲಾ ಸಂಘಟನೆಗಳು  ಆತಂಕ ತೋಡಿಕೊಂಡಿದ್ದು ಇದನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಬಗ್ಗೆ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.



Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99