ಮಂಗಳೂರು- ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಕೊರೊನಾ ರೋಗಿ ಆತ್ಮಹತ್ಯೆ ಯತ್ನ
Monday, May 3, 2021
ಮಂಗಳೂರು; ಮಂಗಳೂರಿನ ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಕೋವಿಡ್ ಪಾಸಿಟಿವ್ ರೋಗಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ನಡೆದಿದೆ.
ಮಂಗಳೂರಿನ ಕಲ್ಲಮುಂಡ್ಕೂರು ಗ್ರಾಮದ 30 ವರ್ಷದ ವ್ಯಕ್ತಿ ಆತ್ಮಹತ್ಯೆ ಗೆ ಯತ್ನಿಸಿದವರು. ಇವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ ವೇಳೆ ಇವರು ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಇವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.