
16 ರ ಬಾಲಕಿಯ ಅತ್ಯಾಚಾರ ನಡೆಸಿದ ಯುವಕ - ಊರು ಬಿಟ್ಟು ಹೋಗಲು ಸಿದ್ದತೆ ನಡೆಸಿದ ಯುವಕ ಅಂದರ್!
Thursday, June 3, 2021
ಲಖನೌ: ಹುಟ್ಟು ಮೂಕಿ, ಕಿವುಡಿ ಬಾಲಕಿಯನ್ನು ಆಕೆಯ ಊರಿನ ಯುವಕನೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಭೂತಾ ಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಸಂಜೆ 16ರ ಹರೆಯದ ಬಾಲಕಿ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲ್ಲಿಗೆ ಬಂದಿರುವ ಯುವಕ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಬಳಿಕ ತನ್ನ ಮನೆಯಲ್ಲಿ ಆಕೆಯನ್ನು ಕೂಡಿಹಾಕಿ ಅತ್ಯಾಚಾರವೆಸಗಿದ್ದಾನೆ. ವಿಚಾರ ತಿಳಿದ ಬಳಿಕ ಬಾಲಕಿಯ ತಂದೆ ಮತ್ತು ಕೆಲ ಗ್ರಾಮಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ.
ಆ ಹೊತ್ತಿಗಾಗಲೇ ಆರೋಪಿ ಊರು ಬಿಟ್ಟು ಓಡಿಹೋಗುವ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ. ಆದರೆ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಕೌನ್ಸೆಲಿಂಗ್ಗೆ ಒಳಪಡಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.