ಕೋವಿಡ್ ಸೋಂಕಿತೆಯ ಮೇಲೆ ಆ್ಯಂಬುಲೆನ್ಸ್ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ: ಆರೋಪ
Thursday, June 10, 2021
ಕಲಬುರಗಿ: ಕೋವಿಡ್ ಸೋಂಕಿತೆಯ ಮೇಲೆ ಆ್ಯಂಬುಲೆನ್ಸ್ ಡ್ರೈವರೇ ಅತ್ಯಾಚಾರಕ್ಕೆ ಯತ್ನಿಸಿರುವನೆಂಬ ಆರೋಪ ಕಲಬುರ್ಗಿ ಜಿಲ್ಲೆಯಲ್ಲಿ ಕೇಳಿಬಂದಿದೆ.
ಆ್ಯಂಬುಲೆನ್ಸ್ ಚಾಲಕ ಪಿಂಟು ಎಂಬಾತ ಅತ್ಯಾಚಾರದ ಆರೋಪ ಕೇಳಿಬಂದಿದೆ.
ನಗರದ ಜಿಮ್ಸ್ನಲ್ಲಿರುವ ಜಯದೇವ ಹೃದ್ರೋಗ ಕೇಂದ್ರದ ರೂಮ್ ನಂ. 429ರಲ್ಲಿ 25 ವರ್ಷದ ಸೋಂಕಿತ ಯುವತಿ ಚಿಕಿತ್ಸೆ ಪಡೆಯುತ್ತಿದ್ದಳು. ಈ ಯುವತಿಯ ಮೇಲೆ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಮಧ್ಯರಾತ್ರಿ ವೇಳೆ ಸೋಂಕಿತೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಕಿರುಚಾಡಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೇಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಜಿಮ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.