
ಯುವತಿ ಹೆಸರಲ್ಲಿ ಫೇಸ್ಬುಕ್ನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿದ ಯುವಕನಿಗೆ ಥಳಿಸಿದ ಯುವತಿ- video
ಕೊಡಗು: ಯುವತಿಯ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್ ಮಾಡುವ ಯುವಕನನ್ನು ಪೊಲೀಸರ ವಶಕ್ಕೆ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಕಳೆದ 15 ದಿನಗಳಿಂದ ಯುವತಿಯ ಹೆಸರಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಚಾಟಿಂಗ್ ಮಾಡುತ್ತಿದ್ದ. ತನ್ನ ಹೆಸರು ಅರುಣಾ ಎಂದು ಹೇಳಿಕೊಂಡಿದ್ದ ಉಪಾಯವಾಗಿ ಆತನನ್ನು ಮಡಿಕೇರಿಗೆ ಕರೆಸಿಕೊಳ್ಳಲಾಗಿತ್ತು. ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಆತನಿಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.
ಇವನ ಹಿಂದೆ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಬಗ್ಗೆ ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.