ಬಾಲಕಿಯ ಸಂಬಂಧಿ ಮಾರುತಿ ಪೂಜೇರಿ (46) ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ. ಬಾಲಕಿ ಬೆಳಗ್ಗೆ ಬಹಿರ್ದೆಸೆಗೆ ತೆರಳಿದಾಗ ಬಾಲಕಿಯನ್ನು ಗದ್ದೆಗೆ ಕರೆದೊಯ್ದು, ಅವಳ ಬಾಯಿಗೆ ಬಟ್ಟೆ ಕಟ್ಟಿ ಕೃತ್ಯ ಎಸಗಿದ್ಡಿದಾನೆ ಎಂದು ಆರೋಪಿಸಲಾಗಿದೆ.
ಘಟನೆ ನಡೆದ ಬಳಿಕ ಬಾಲಕಿ ಹೆದರಿ ವಿಷ ಸೇವನೆ ಮಾಡಿದ್ದು, ಸದ್ಯ ಬೆಳಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.