ಗುಜರಾತಿನ ಆನಂದ್ 17 ವರ್ಷದ ಬಾಲಕ. ಮೇ 25ರಿಂದ ನಾಪತ್ತೆಯಾಗಿದ್ದ. ಸಾಕಷ್ಟು ಹುಡುಕಾಡಿ, ಪತ್ತೆಹಚ್ಚಲು ಸಾಧ್ಯವಾಗದಿದ್ದಾಗ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಸೂರತ್ನಲ್ಲಿ ಹುಡುಗನನ್ನು ಪತ್ತೆಹಚ್ಚಿದ್ದಾರೆ.
ಮದುವೆ ಆಗುವುದಾಗಿ ನಂಬಿಸಿ ಗುಜರಾತ್ನ ಆನಂದನನ್ನು ಮಹಿಳೆ ಕರೆದೊಯ್ದಿದ್ದಳು. ವಿಚಾರಣೆ ವೇಳೆ ಹುಡುಗನ ಜತೆ ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ಮಹಿಳೆ ಒಪ್ಪಿಕೊಂಡಿದ್ದಾಳೆ. ಸದ್ಯ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.