Header Ad

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಓದಿದ್ದು ವ್ಯರ್ಥವಾಯಿತು ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!


ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಆಯಿತು ಎಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ  ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ಘಟನೆ ನಡೆದಿದೆ.

ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದು, ಕೊರೊನಾ ಕಾರಣದಿಂದ ಪರೀಕ್ಷೆ ರದ್ದಾಗಿ, ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ನೀಡುವ ಘೋಷಣೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪರೀಕ್ಷೆ ರದ್ದಾದ ಕಾರಣ ವರ್ಷಪೂರ್ತಿ ಓದಿದ್ದು ವ್ಯರ್ಥವಾಯಿತು ಶುಕ್ರವಾರ ಮಧ್ಯಾಹ್ನದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿಗಳು