ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಗೆ ಕೊರೊನಾ ಪಾಸಿಟಿವ್ - ಚಿಕಿತ್ಸೆ ಎಲ್ಲಿ?
Friday, June 4, 2021
ಮಂಗಳೂರು: ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅ ವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆದರೆ ಚಿಕಿತ್ಸೆ ಗೆ ಯಾವುದೇ ಆಸ್ಪತ್ರೆ ದಾಖಲಾಗದೆ ಹೋಂ ಐಸೋಲೇಷನ್ ನಲ್ಲಿ ಇರಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ತಮಗೆ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಹೋಂ ಐಸೋಲೇಷನ್ ನಲ್ಲಿ ಇದ್ದು ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದ್ದೇನೆ. ಸಾರ್ವಜನಿಕರೂ ಕೂಡ ಆರೋಗ್ಯದ ಬಗ್ಗೆ ಗಮನ ಹರಿಸಿ. ಕೋವಿಡ್ ವಿರುದ್ಧ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೆ ಆಗಲಿ ಎಂದು ಹೇಳಿದ್ದಾರೆ.