
ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ- ಮಗು ಸೇರಿದಂತೆ ಮೂವರು ಸಾವು
ತಮಿಳುನಾಡಿನ ಕಾರ್ಖಾನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿ ಮಗು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ
ತಮಿಳುನಾಡು ವಿರುಧುನಗರ್ ಜಿಲ್ಲೆಯ ಶಿವಕಾಶಿ ಎಂಬಲ್ಲಿಯ ಥಾಯಿಲ್ ಪಟ್ಟಿಯ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಪೋಟ ನಡೆದಿದೆ.ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.