Mangalore; ಊಟ ಮಾಡುವಾಗ ಗಂಟಲಲ್ಲಿ ಸಿಕ್ಕಿಕೊಂಡ ಆಹಾರ- ಪುತ್ತೂರಿನ ವ್ಯಕ್ತಿ ಸಾವು
Tuesday, June 15, 2021
ಮಂಗಳೂರು; ಮಧ್ಯಾಹ್ನದ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಗಂಟಲಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕೊರಗಪ್ಪ ನಲಿಕೆ ಎಂಬವರು ಗಂಟಲಲ್ಲಿ ಆಹಾರ ಸಿಲುಕಿ ಮೃತಪಟ್ಟವರು. ಇವರು ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ಕುಕ್ಕುಪುಣಿಯವರು. ನಿನ್ನೆ ಮಧ್ಯಾಹ್ನ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಗಂಟಲಲ್ಲಿ ಸಿಲುಕಿಕೊಂಡು ಉಸಿರಾಡಲು ಕಷ್ಟವಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಅವರನ್ನು ಕೂಡಲೇ ಅಟೋರಿಕ್ಷಾದಲ್ಲಿ ಮುಡಿಪಿನಡ್ಕ ಕಶ್ಯಪ ಕ್ಲಿನಿಕ್ ಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲು ಸೂಚಿಸಿದ್ದಾರೆ. ಅವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಾಗ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಮಗ ಲಕ್ಷ್ಮೀಶ್ ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.