27 ವರ್ಷದ ಪ್ರಜ್ವಲಾ ತನ್ನ ಎರಡು ವರ್ಷದ ಹೆಣ್ಣು ಮಗು ಸಾಧ್ವಿಯೊಂದಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡನೇ ಪತಿ ಮೋಹನ್ ಮನೆಯಿಂದ ಹೊರ ಹೋದಾಗ ಪ್ರಜ್ವಲಾ ಈ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. ಮೋಹನ್ ಜೊತೆ ಗಲಾಟೆ ಮಾಡಿಕೊಂಡು ಪ್ರಜ್ವಲ ನೇಣಿಗೆ ಶರಣಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸಾವಿಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿದುಬರಬೇಕಿದೆ . ಸಕಲೇಶಪುರ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.