ಫೇಸ್ಬುಕ್ನಲ್ಲಿ ಪ್ರೀತಿ, ಬಳಿಕ ಮದುವೆ, ಮುಂದೆ ನಡೆದ್ದದ್ದು ಮಾತ್ರ.....
Thursday, June 24, 2021
ಗಂಗಾವತಿ: ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲ್ಲೂಕಿನ ಸಣಾಪುರದಲ್ಲಿ ಜರುಗಿದೆ.
ಶಿಲ್ಪಾ (19) ಶವವಾಗಿ ಪತ್ತೆಯಾದ ಯುವತಿ. ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಳೆಹೊನ್ನೂರು ಹೋಬಳಿಯ ಹೊಸಕೊಪ್ಪ ಗ್ರಾಮದ ವಾಸವಿದ್ದ ಈಕೆ ಕಳೆದ ಡಿಸೆಂಬರ್ ನಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್, ಮುಖಾಂತರ ಗಂಗಾವತಿ ತಾಲ್ಲೂಕಿನ ಸಾಣಾಪುರದ ವಿಕ್ರಂ (22) ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು.
ಕಳೆದ ಮಂಗಳವಾರ ರಾತ್ರಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವತಿಯ ದೇಹ ಮನೆಯಲ್ಲಿ ಪತ್ತೆಯಾಗಿದ್ದು, ಆಕೆಯ ಪಾಲಕರು ಇದನ್ನು ಕೊಲೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.