ಪಾಲಕರ ಒಪ್ಪಿಗೆ ಇಲ್ಲದೆ ಮದುವೆಯಾದ ಜೋಡಿಗೆ ಆಗಿದ್ದೇನು ಗೊತ್ತಾ..??
Thursday, June 24, 2021
ಹೈದರಾಬಾದ್: ಪಾಲಕರ ಒಪ್ಪಿಗೆ ಇಲ್ಲದೆ ಪ್ರೀತಿಸಿದ ಯುವತಿಯನ್ನು ಮದುವೆಯಾದ ಯುವಕನನ್ನು ಯುವತಿಯ ಸಂಬಂಧಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮಾತನಾಡಿ ಸಮಸ್ಯೆ ಬಗೆಹರಿಸುವ ನೆಪದಲ್ಲಿ ಯುವಕನನ್ನು ಕರೆದು ಮಾತನಾಡಲು ಬರುವಾಗ ರಸ್ತೆಯಲ್ಲೇ ಯುವಕನನ್ನು ಅಡ್ಡಗಟ್ಟಿ ಯುವತಿ ಕಡೆಯವರು ಹಲ್ಲೆ ಮಾಡಿದ್ದಾರೆ. ಯುವಕ ರಾಮು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ.
ಯುವತಿ ಮಾಧವಿ ತನ್ನ ಸಂಬಂಧಿಕರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.