ಹೆಂಡತಿಯನ್ನು ಚುಡಾಯಿಸಿದ ಯುವಕನ ಮೇಲೆ ಪೆಟ್ರೋಲ್ ಸುರಿದು ಹತ್ಯೆ....
Thursday, June 24, 2021
ಕಲಬುರಗಿ: ಹೆಂಡತಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಯುವಕನೋರ್ವನ ಕೈ ಕಟ್ಟಿ, ಮುಖದ ಮೇಲೆ ಕಲ್ಲು ಎತ್ತಿ ಹಾಕಿ, ಮೈಮೇಲೆ ಪೆಟ್ರೋಲ್ ಸುರಿದು ಭೀಕರವಾಗಿ ಆತನನ್ನು ಕೊಲೆ ಮಾಡಿದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಶಿವಪುತ್ರ ಪಗಡೆ (23) ಎಂಬ ಯುವಕನನ್ನು ಜೂನ್ 19ರಂದು ಬೊಲೆರೋ ವಾಹನದಲ್ಲಿ ಅಪಹರಿಸಿ, ಕಲಬುರಗಿ ನಗರದ ಹೊರವಲಯದ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆತನ ಎರಡೂ ಕೈಗಳನ್ನು ಕಟ್ಟಿ, ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಜಜ್ಜಿ ಕೊಲೆ ಮಾಡಿದ್ದರು. ಆ ಬಳಿಕ ಮೈಮೇಲೆ ಪೆಟ್ರೋಲ್ ಸುರಿದು ಭೀಕರವಾಗಿ ಹತ್ಯೆ ಮಾಡಿದ್ದರು.