
ಮೂರು ತಿಂಗಳ ಹಿಂದೆಯಷ್ಟೇ ಮದುವೆ.. ಈಗ ಪತಿಯಿಂದಲೇ ಪತ್ನಿಯ ಕೊಲೆ..!!
ಚಿಕ್ಕಮಗಳೂರು : ಅಕ್ರಮ ಸಂಬಂಧ ಪ್ರಶ್ನಿಸಿದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ಸಂಭವಿಸಿದೆ.
ಸಿಮ್ರಾನ್ (22) ತನ್ನ ಗಂಡನಿಂದಲೆ ಮೃತಪಟ್ಟವಳು. ಸಿಮ್ರಾನ್ ಪತಿ ಫೈರೂಜ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಜೊತೆ ಫೈರೋಜ್ ವಿವಾಹವಾಗಿತ್ತು.
ಅಕ್ರಮ ಸಂಬಂಧದ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ಯಾಕೆ ಇನ್ನು ನೀರಿನ ಸಂಪ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಮ್ರಾನ್ ಪತಿ ಫೈರೋಜ್, ಅತ್ತೆ, ಮಾವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.