ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು - ಸಚಿವ ಸುರೇಶ್ ಕುಮಾರ್ (Video)
Friday, June 4, 2021
ಬೆಂಗಳೂರು: 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯದಲ್ಲಿ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಕಾರಣದಿಂದ ಈಗಾಗಲೇ ಕೇಂದ್ರ ಮಟ್ಟದ ಸಿಬಿಎಸ್ ಇ ಮತ್ತು ಐಸಿಎಸ್‌ಇಯ 10ನೇ ಹಾಗೂ 12ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು ರಾಜ್ಯದ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳ ಬಗ್ಗೆಯೂ ಗೊಂದಲಗಳು ತಲೆದೋರಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿ ಮೂಲಕ ದ್ವಿತೀಯ ಪಿಯುಸಿ ರದ್ದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಪರೀಕ್ಷೆ ರದ್ದತಿ ಕುರಿತು ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಶಿಕ್ಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳು ಮಾತ್ರವಲ್ಲದೆ ಸಿಎಂ,ಶಾಸಕ, ಸಚಿವರು, ಪ್ರಮುಖ ಜನಪ್ರತಿನಿಧಿಗಳಿಂದ ಅಭಿಪ್ರಾಯವನ್ನು ಸುರೇಶ್ ಕುಮಾರ್ ಸಂಗ್ರಹಿಸಿದ್ದರು.
Posted by Suresh Kumar S on Thursday, June 3, 2021