ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ! ಪೊಲೀಸ್ ಠಾಣಾ ಸಿಬ್ಬಂದಿ ವಿರುದ್ಧ ದೂರು ದಾಖಲು
Sunday, June 13, 2021
ರಾಂಚಿ: ಪೊಲೀಸ್ ಠಾಣೆಯ ಸಿಬ್ಬಂದಿ ಓರ್ವ ಮದುವೆಯಾಗುತ್ತೇನೆ ಎಂದು ನಂಬಿಸಿ ಯುವತಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ರೇಪ್ ಮಾಡಿ ಅಲ್ಲಿಯೇ ಬಿಟ್ಟು ಬಂದಿರುವ ಘಟನೆ ಜಾರ್ಖಂಡ್ನ ಮುಸಬಾನಿ ಹತ್ತಿರ ನಡೆದಿದೆ.
ಪೊಲೀಸ್ ಠಾಣೆಯ ಸಿಬ್ಬಂದಿ ಪ್ರೇಮ್ ಚಂದ್ ನಾನು ನಿನ್ನ ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆಂದು ಯುವತಿಯನ್ನು ನಂಬಿಸಿದ್ದಾನೆ. ಆತ ಪೊಲೀಸ್ ಠಾಣಾ ಸಿಬ್ಬಂದಿಯಾಗಿದ್ದರಿಂದ ಯುವತಿ ಸುಲಭವಾಗಿ ನಂಬಿ ಆತನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ.
ಒಂದು ದಿನ ಯುವತಿ ಮದುವೆಯಾಗೆಂದು ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯಾಗುವುದಕ್ಕೆಂದು ದೇವಸ್ಥಾನವೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ದೇವಸ್ಥಾನದಲ್ಲಿ ಜನರಿದ್ದಾರೆ ಎನ್ನುವ ಕಾರಣ ಕೊಟ್ಟು, ಕಾಡಿನಲ್ಲಿ ಮದುವೆಯಾಗೋಣವೆಂದು ಅಲ್ಲಿಗೆ ಕರೆದುಕೊಂಡು ಹೋಗಿದ್ದಾನೆ.
ಆಕೆ ಒಪ್ಪದಿದ್ದರೂ ಬಲವಂತವಾಗಿ ಆಕೆಯನ್ನು ಅತ್ಯಾಚಾರ ಮಾಡಿ ಅದಾದ ನಂತರವೂ ಮದುವೆಯಾಗೆಂದು ಹಠ ಹಿಡಿದ ಆಕೆಯನ್ನು ಅಲ್ಲಿಯೇ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಆತ ಈವರೆಗೆ ಸಾಕಷ್ಟು ಬಾರಿ ಯುವತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾನೆ. ಈ ವಿಚಾರವಾಗಿ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.