ಸಹೋದರಿಯರಿಬ್ಬರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಅತ್ಯಾಚಾರ ಕೊಲೆ ಶಂಕೆ
Sunday, June 13, 2021
ಗುವಾಹಟಿ (ಅಸ್ಸಾಂ): ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಹೋದರಿಯರಿಬ್ಬರು ಪತ್ತೆಯಾಗಿರುವ ಘಟನೆ ಪಶ್ಚಿಮ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಭಯಕುತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ 14 ಮತ್ತು 16 ವರ್ಷದ ಬಾಲಕಿಯರು ಮೃತಪಟ್ಟಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಬಾಲಕಿಯರ ಕುಟುಂಬಸ್ಥರು ಆರೋಪಿಸಿದ್ದಾರೆ.
ಸದ್ಯಕ್ಕೆ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಕ್ರಜಾರ್ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.