
ಗಂಡನ ಮನೆಯಲ್ಲಿ ಮಹಿಳೆ ಸಾವಿಗೆ ಶರಣು- ಇದು ಕೊಲೆಯೋ ....ಆತ್ಮಹತ್ಯೆಯೋ..?
Monday, June 21, 2021
ಕೊಲ್ಲಂ (ಕೇರಳ): 24 ವರ್ಷದ ವಿವಾಹಿತ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಕೇರಳದ ಕೊಲ್ಲಂನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ವಿಸ್ಮಯ ಮೃತ ದುರ್ದೈವಿ . ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಮೃತಳ ಸಂಬಂಧಿಕರು ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ. 2020ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವಿಸ್ಮಯ ಗಂಡ ಕಿರಣಕುಮಾರ್ ಮೋಟಾರು ವಾಹನ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮದುವೆಯ ಬಳಿಕ ಈಕೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಕೂಡ ಆಕೆಯ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುಂಚಿತವಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಜತೆಗೆ ಆಕೆಯ ಮೇಲೆ ಹಲ್ಲೆ ನಡೆಸಿರುವ ಫೋಟೋ ಸಹ ಕಳುಹಿಸಿದ್ದಳು ಎಂದು ತಿಳಿದು ಬಂದಿದೆ.