-->
ads hereindex.jpg
UDUPI-ಹೋಮ ಕುಂಡದಲ್ಲಿ ಪತಿಯನ್ನು ಸುಟ್ಟು ಕೊಂದ ಪ್ರಕರಣ-ಪತ್ನಿ, ಪುತ್ರ, ಪ್ರಿಯಕರನಿಗೆ ಜೀವಿತಾವಧಿ‌ ಜೈಲು ಶಿಕ್ಷೆ

UDUPI-ಹೋಮ ಕುಂಡದಲ್ಲಿ ಪತಿಯನ್ನು ಸುಟ್ಟು ಕೊಂದ ಪ್ರಕರಣ-ಪತ್ನಿ, ಪುತ್ರ, ಪ್ರಿಯಕರನಿಗೆ ಜೀವಿತಾವಧಿ‌ ಜೈಲು ಶಿಕ್ಷೆ


ಉಡುಪಿ:  ಉದ್ಯಮಿ ಭಾಸ್ಕರ ಶೆಟ್ಟಿ(52) ಅವರನ್ನು ಹೋಮಕುಂಡದಲ್ಲಿ ಸುಟ್ಟು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು ಆರೋಪಿಗಳಾದ ಭಾಸ್ಕರ್ ರ ಪತ್ನಿ, ಮಗ ಸಹಿತ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ಅವರು  ತೀರ್ಪು ಪ್ರಕಟಿಸಿದರು. ಮೃತ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಅವರಿಗೆ ಜೀವಿತಾವಧಿ ಜೈಲು ಶಿಕ್ಷೆ ನೀಡಲಾಗಿದೆ.ಸಾಕ್ಷ್ಯನಾಶದ ಆರೋಪವಿದ್ದ  ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.  

 ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.

ಸದ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಮೃತಪಟ್ಟಿದ್ದರು.ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು.ಜುಲೈ.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು  ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಬಂಧಿಸಿದ್ದರು.

Ads on article

Advertise in articles 1

suvidha.jpg

advertising articles 2

Advertise under the article

SNM4.jpeg CLICK-HERE