
ಚಿಕಿತ್ಸೆಗೆ ಸ್ಪಂದಿಸದೆ ಸಂಚಾರಿ ವಿಜಯ್ - ಆರೋಗ್ಯ ಸ್ಥಿತಿ ಗಂಭೀರ
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಶನಿವಾರ ರಾತ್ರಿ ಜೆ.ಪಿ.ನಗರದಲ್ಲಿ ತಮ್ಮ ಸ್ನೇಹಿತರ ಮನೆಗೆ ಹೋಗಿ ವಾಪಸ್ಸು ಬರುತ್ತಿದ್ದ ವೇಳೆ ಬೈಕ್‍ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ವಿಜಯ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಗಂಭೀರವಾಗಿದ್ದ ಅವರನ್ನು ಬಳಿಕ ದಾರಿಹೋಕರು ಅವರನ್ನು ಬನ್ನೇರುಘಟ್ಟದ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದರು.
ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ನಿನ್ನೆ ಮುಂಜಾನೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಉಸಿರಾಡುತ್ತಿದ್ದಾರೆ- ಹೆಲ್ತ್ ಬುಲೆಟಿನ್!
ಸಂಚಾರಿ ವಿಜಯ ಅವರು ಸಾವನ್ನಪ್ಪಿರುವ ಬಗ್ಗೆ ಹರಡಿರುವ ಸುದ್ದಿಯ ನಡುವೆ ಅವರು ಉಸಿರಾಡುತ್ತಿದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ
ವಿಜಯ್ ಆರೋಗ್ಯದ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ. ನಿನ್ನೆಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯ್ ಸ್ಥಿತಿ ಗಂಭೀರವಾಗಿದೆ . ಮೆದುಳಿನ ಕೆಲಸಗಳು ನಿಂತು ಹೋಗಿವೆ. ಇದನ್ನು ಬ್ರೇನ್ ಫೇಲ್ಯೂರ್ ಎಂದು ಹೇಳುತ್ತೇವೆ. ಆದರೆ ಅವರ ದೈಹಿಕ ಕೆಲಸಗಳು ಸರಿಯಾಗಿ ನಡೆಯುತ್ತಿವೆ. ಇದು ಮುಂದುವರಿದರೆ ಚೇತರಿಕೆ ಸಾಧ್ಯತೆ ಕಡಿಮೆ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ವೆಂಟಿಲೇಟರ್ ಮೇಲೆ ವಿಜಯ್ ಇದ್ದಾರೆ. ನಾವು ಏನೇ ಚಿಕಿತ್ಸೆ ಕೊಟ್ಟರೂ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅವರ ಮೆದುಳು ನಿಷ್ಕ್ರಿಯವಾಗುತ್ತಿದೆ. ಮೆದುಳು ನಿಷ್ಕ್ರಿಯ ಹಂತದಲ್ಲಿ ಬಿಪಿ ಕಂಟ್ರೋಲ್ ಇರಲ್ಲ. ಅವರ ತಲೆಬುರುಡೆ ಸಹ ಡ್ಯಾಮೇಜ್ ಆಗಿದೆ ಅಂತಾ ವೈದ್ಯರು ತಿಳಿಸಿದ್ದಾರೆ