-->

ಬಾಲಕಿಯನ್ನು ವಿವಸ್ತ್ರಗೊಳಿಸಿ ವಿಡಿಯೋ ವೈರಲ್: ಸಿಎಂ ಯೋಗಿ ನಾಡಲ್ಲಿ ಇದೆಂತ ಘಟನೆ?

ಬಾಲಕಿಯನ್ನು ವಿವಸ್ತ್ರಗೊಳಿಸಿ ವಿಡಿಯೋ ವೈರಲ್: ಸಿಎಂ ಯೋಗಿ ನಾಡಲ್ಲಿ ಇದೆಂತ ಘಟನೆ?



ಮೊರದಾಬಾದ್( ಉತ್ತರ ಪ್ರದೇಶ):  ಯುವಕರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಆಕೆ ಕೈ ಮುಗಿದು ಬೇಡಿಕೊಂಡರೂ, ಮನ ಕರಗದ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ಬಯಲಿನಲ್ಲಿ ವಿವಸ್ತ್ರಗೊಳಿಸಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ವಿಡಿಯೋ ವೈರಲ್ ಮಾಡಿದ ಘಟನೆ ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

 ಬಾಲಕ ಮತ್ತು ಬಾಲಕಿ ಇಬ್ಬರು ತೋಟವೊಂದರ ಬಳಿ ಕುಳಿತುಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ ಪುಂಡರು ಬಾಲಕನ ಮೇಲೆ ಹಲ್ಲೆ ಮಾಡಿ, ಬಾಲಕಿಯನ್ನು ವಿವಸ್ತ್ರಗೊಳಿಸಿದ್ದಾರೆ. ಈ ಘಟನೆಯ ನಂತರ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಗಳನ್ನು ಮೊಹಮದ್ ಅರ್ಷದ್ ಮತ್ತು ಸಯೀದ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ದೇಹಾತ್ ವಿದ್ಯಾಸಾಗರ್ ಮಿಶ್ರಾ, ವಿಡಿಯೋ ವೈರಲ್ ಆಗಿರುವ ವಿಚಾರ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಂದೆ ದೂರು ನೀಡಿದ್ದು, ಐಟಿ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99